ಬೆಂಗಳೂರು: ರಾಜ್ಯದಲ್ಲಿ ‘ಝಿಕಾ’ ವೈರಸ್ ಆತಂಕ ಸೃಷ್ಟಿಸಿದೆ. ಒಂದು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಪುಣೆ ಲ್ಯಾಬ್ ರಿಪೋರ್ಟ್ ಪ್ರಕಾರ ರಾಜ್ಯದಲ್ಲಿ 5 ವರ್ಷದ ಒಂದು ಹೆಣ್ಣು ಮಗುವಿಗೆ ಝಿಕಾ ವೈರಸ್ ಇರುವುದು ಖಚಿತವಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ರಾಜ್ಯದಲ್ಲಿ ಇದು ಮೊದಲ ಪ್ರಕರಣವಾಗಿದ್ದು ಸರ್ಕಾರ ಇದನ್ನು ಬಹಳ ಎಚ್ಚರದಿಂದ ಗಮನಿಸುತ್ತಿದೆ ಮತ್ತು ಅದನ್ನು ನಿರ್ವಹಿಸಲು ಸಜ್ಜಾಗಿದೆ ಎಂದು ಸಚಿವರು ಹೇಳಿದರು.
























































