ಬೆಂಗಳೂರು: ಸಹಕಾರ ಇಲಾಖೆ ಹಾಗೂ ರಾಜ್ಯದ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಸಹಕಾರ ಫಲಾನುಭವಿಗಳ ಸಮಾವೇಶ ಶುಕ್ರವಾರ ಸಂಜೆ 5 ಗಂಟೆಗೆ ಗಾಯಿತ್ರಿ ವಿಹಾರ, ಗೇಟ್ ನಂ.4, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದೆ..
ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಾಗೂ ಹಿರಿಯ ಸಚಿವರು ಉಪಸ್ಥಿತರಿರಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
























































