ಬೆಂಗಳೂರು: ಸಿಎಂ ಬೊಮ್ಮಾಯಿ ಬಗ್ಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೋಡಿದ್ದಾರೆ ಎನ್ನಲಾದ ಹೇಳಿಕೆ ಬಗ್ಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಸಿದ್ದರಾಮಯ್ಯ ಅವರು ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸುತ್ತಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ನದೇ ದಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಎಂ ಬಗ್ಗೆ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು. ‘ಸಿದ್ದರಾಮಯ್ಯ ಸಿಎಂರನ್ನ ನಾಯಿ ಮರಿಗೆ ಹೋಲಿಸಿ ಮಾತನಾಡಿದ್ದು ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲೂ ನಾಯಿ ಇದೆ. ನಾಯಿ ಬಗ್ಗೆ ನನಗೆ ಗೌರವ ಇದೆ. ಕಳ್ಳರನ್ನ ಹಿಡಿಯೋಕೆ ರಕ್ಷಣೆಗೆ ನಾಯಿಬೇಕು. ಕಷ್ಟಕ್ಕೆ ಸುಖಕ್ಕೆ ನಾಯಿ ಬೇಕು. ನಾಯಿ ನಾರಾಯಣ ಅಂತಾರೆ. ನಾಯಿ ನನಗೆ ಬಹಳ ಪ್ರಿಯವಾದ ಪ್ರಾಣಿ. ಸಿದ್ದರಾಮಯ್ಯ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.