ಮೈಸೂರು: “ಸ್ವದೇಶ ದರ್ಶನ್” 2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ. ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ.
ಕೇಂದ್ರೀಯ ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಸರ್ಕ್ಯೂಟ್‌ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
"ಸ್ವದೇಶ ದರ್ಶನ್"2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ.
ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ.
ಕೇಂದ್ರ ಪ್ರವಾಸೋದ್ಯಮ & ಸಂಸ್ಕೃತಿ ಸಚಿವಾಲಯಕ್ಕೆ ಅನಂತ ಅಭಿನಂದನೆಗಳು.@CMofKarnataka @tourismgoi pic.twitter.com/IWpel8bk4V— S T Somashekar Gowda (@STSomashekarMLA) January 5, 2023
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.