ಬೆಂಗಳೂರು: ಮುಳಬಾಗಿಲು ನಾಗೇಶ್, ಜೆಡಿಎಸ್ ಮುಖಂಡ, ಮಾಜಿ ಎಂಎಲ್ಸಿ ವೈ.ಎಸ್.ವಿ ದತ್ತ, ಮೈಸೂರಿನ ಬಿಜೆಪಿ ಮುಖಂಡ, ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ಕಾರ್ಯಕ್ರಮ, ಕೆಪಿಸಿಸಿ ಕಚೇರಿ https://t.co/VSjJYDEA2z
— Karnataka Congress (@INCKarnataka) January 14, 2023
ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಧ್ರುವನಾರಾಯಣ್, ಹಿರಿಯ ಮುಖಂಡ ಡಾ. ಬಿ ಎಲ್ ಶಂಕರ್, ಮಾಜಿ ಎಂಎಲ್ಸಿ ರಮೇಶ್ ಬಾಬು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.