ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಇಂದು ಶೃಂಗೇರಿಯಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ದಲ್ಲಿ ಭಾಗವಹಿಸಿದ್ದರು. ಮನೆ ಮನೆಗೆ ಭೇಟಿ ನೀಡಿದ ಅವರು ಪಕ್ಷದ ಸರಕಾರಗಳ ಸಾಧನೆ ಕುರಿತು ಕರಪತ್ರವನ್ನು ವಿತರಿಸಿದರು.
ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಮತ್ತು ರಾಜ್ಯದಲ್ಲಿನ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರಗಳ ಜನಪರ ಯೋಜನೆಗಳ ಕುರಿತು ತಿಳಿಸಿದ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು.
ಪಕ್ಷದ ಜನೋಪಯೋಗಿ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಪಕ್ಷವು ಹೆಚ್ಚಿನ ಸ್ಥಾನಗಳಿಂದ ಗೆಲ್ಲುವಂತೆ ನೋಡಿಕೊಳ್ಳಲು ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಕರಪತ್ರ ಹಂಚುವ, ಸದಸ್ಯತ್ವ ನೋಂದಣಿ ಮತ್ತು ಮನೆಗಳಲ್ಲಿ ಸ್ಟಿಕರ್ ಅಂಟಿಸುವ ಕಾರ್ಯಗಳಲ್ಲಿ ಉತ್ಸಾಹದಿಂದ ತಮ್ಮನ್ನು ತೊಡಗಿಸಿಕೊಂಡಿದ್ದರು.



















































