ಬೆಂಗಳೂರು: ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಅವರು ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ಚಿಕ್ಕಬಸ್ತಿ, ದೊಡ್ಡಬಸ್ತಿ, ರಾಮಸಂದ್ರ, ಕೆಂಚನಪುರ, ಸೂಲಿಕೆರೆ, ಬೈರೋಹಳ್ಳಿ, ಕೊಮ್ಮಘಟ್ಟ ಸೇರಿದಂತೆ ಹಲವೆಡೆ ಬೂತ್ ಮಟ್ಟದ ಸಭೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.
ಶಾಸಕ, ಸಚಿವರಾಗಿ ಸುಮಾರು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಕಷ್ಟು ಸವಲತ್ತುಗಳನ್ನು ನೀಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ ಎಂದರು.
ಇದೇ ವೇಳೆ ಜೆಡಿಎಸ್, ಕಾಂಗ್ರೆಸ್ ನ ನಾನಾ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.