ರಿಯಾದ್: ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್ ಬಳಿಯ ಬ್ರಿಡ್ಜ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಮಂದಿ ಬಲಿಯಾಗಿದ್ದಾರೆ.
ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.
ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್ ಬಳಿ ಬ್ರಿಜ್‌ನಲ್ಲಿ ಸೋಮವಾರ ಈ ಅವಘಡ ಸಂಭವಿಸಿದೆ. ಗಾಯಗೊಂಡಿರುವ ಸುಮಾರು 29 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
























































