ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ನಡೆಸಿದ ಪ್ರತಿಭಟನೆ ವೇಳೆ ಉದ್ರಿಕ್ತ ಗುಂಪು ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದೆ. ಸೋಮವಾರ ಈ ಘಟನೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
ಈ ನಡುವೆ ಪ್ರತಿಭಟನಾಕಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಪೊಲೀಸ್ ಲಾಠಿ ಪ್ರಹಾರವನ್ನು ಖಂಡಿಸಿರುವ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್, ತನ್ನ ಹುಟ್ಟಿನಿಂದಲೇ ಮೀಸಲಾತಿ ವಿರೋಧಿ. ಚುನಾವಣೆಗಾಗಿ ಸಹೋದರ ಜಾತಿಗಳನ್ನು ಪರಸ್ಪರರ ವಿರುದ್ಧ ಎತ್ತಿಕಟ್ಟಿ ಬಿಜೆಪಿ ಮನೆ ಮುರುಕ ರಾಜಕಾರಣ ಮಾಡುತ್ತಿದೆ. ಬಂಜಾರ ಸಮುದಾಯವನ್ನು ಆತಂಕಕ್ಕೆ ದೂಡಿ ಈಗ ಲಾಠಿ ಚಾರ್ಜ್ ಮಾಡಿಸಿದೆ ಎಂದು ದೂರಿದ್ದಾರೆ.
ಬಂಜಾರ ಸಮುದಾಯದ ಮೇಲಿನ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ್ದೇನೆ. @BJP4India ತನ್ನ ಹುಟ್ಟಿನಿಂದಲೇ ಮೀಸಲಾತಿ ವಿರೋಧಿ. ಚುನಾವಣೆಗಾಗಿ ಸಹೋದರ ಜಾತಿಗಳನ್ನು ಪರಸ್ಪರರ ವಿರುದ್ಧ ಎತ್ತಿಕಟ್ಟಿ @BJP4Karnataka ಮನೆ ಮುರುಕ ರಾಜಕಾರಣ ಮಾಡುತ್ತಿದೆ. ಬಂಜಾರ ಸಮುದಾಯವನ್ನು ಆತಂಕಕ್ಕೆ ದೂಡಿ ಈಗ ಲಾಠಿ ಚಾರ್ಜ್ ಮಾಡಿಸಿದ್ದು ಖಂಡನೀಯ1/3 pic.twitter.com/2OZnkDMded
— Prakash Rathod (@PRathod_INC) March 27, 2023

























































