ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಸುದ್ದುಗೋಷ್ಠಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದರು.
-
ಒಂದೇ ಹಂತಗಳಲ್ಲಿ ಮತದಾನ ನಡೆಯಲಿದೆ.
-
ಮೇ 10ರಂದು ಮೊದಲ ಹಂತದ ಮತದಾನ ನಡೆಯಲಿದೆ.
-
ಮೇ 13ರಂದು ಮತಗಳ ಎಣಿಕೆ ನಡೆಯಲಿದೆ.
ಕರ್ನಾಟಕದಲ್ಲಿ 5.21 ಮತದಾರರಿದ್ದು, ಈ ಪೈಕಿ 9.17 ಲಕ್ಷ ಮಂದಿ ಹೊಸದಾಗಿ ಸೇರ್ಪಡೆಯಾಗಿರುವ ಮತದಾರರಿದ್ದಾರೆ. ರಾಜ್ಯದಲ್ಲಿ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ನಗರದಲ್ಲಿ, ಗ್ರಾಮೀಣ ಪ್ರದೇಶದಲ್ಲಿ 34,219 ಹಾಗೂ ಮಹಿಳೆಯರಿಗಾಗಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ನತ ಚುನಾವಣೆಗಾಗಿ ಸಕಲ ರೀತಿಯ ತಯಾರಿ ನಡೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ನೀತಿಸಂಹಿತೆಯೂ ಜಾರಿಗೆ ಬಂದಿದೆ ಎಂದು ಆಯೋಗದ ಮುಖ್ಯಸ್ಥರು ಪ್ರಕಟಿಸಿದರು.


















































