ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಆದರೂ ಮೂರನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು, ಮಾಸ್ಕ್ ಧರಿಸಬೇಕು ಎಂದು ಜನತೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕಳೆದ ವಾರವಷ್ಟೇ ಕೋವಿಡ್‌ಗೆ ಸಂಬಂಧಿಸಿದಂತೆ ಮಾರ್ಗಸೂಚಿ ನೀಡಲಾಗಿದೆ. ಪರೀಕ್ಷೆ ಹೆಚ್ಚಳ, ಜೀನೋಮಿಕ್ ಸೀಕ್ವೆನ್ಸ್, ಆಸ್ಪತ್ರೆ ದಾಖಲು ಮೊದಲಾದವುಗಳ ಬಗ್ಗೆ ಗಮನಹರಿಸಲಾಗಿದೆ. ರಾಜ್ಯದಲ್ಲಿ ಈಗ ಕೋವಿಡ್ ನಿಯಂತ್ರಣದಲ್ಲಿದೆ. ಆದರೆ ಜನರು ಮೂರನೇ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು. ಜೊತೆಗೆ ಜನಸಂದಣಿಯ ಪ್ರದೇಶಗಳಿಗೆ ಹೋಗಬಾರದು, ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಸರ್ಕಾರ ಕಾನೂನು ಪ್ರಕಾರ ಎಲ್ಲವನ್ನೂ ಮಾಡುತ್ತದೆ. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಯೋಜನೆಗಳನ್ನು ರೂಪಿಸಲಾಗಿದೆ. ಕೈಗಾರಿಕಾ ಕ್ಷೇತ್ರದಲ್ಲೂ ಉತ್ತಮ ಯೋಜನೆಗಳನ್ನು ನೀಡಿದೆ. ಆದರೆ ಕಾಂಗ್ರೆಸ್ ಪಕ್ಷ ಆಧಾರರಹಿತವಾಗಿ ಎಲ್ಲದಕ್ಕೂ ಆರೋಪ ಮಾಡುತ್ತಿದೆ ಎಂದರು.