‘ಕನ್ನಡದ ಕಂದ’ ನುಡಿಸಿದ ಪಿಯಾನೋ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅಚ್ಚರಿ, ಕುತೂಹಲ ಮೂಡಿಸಿದೆ. ಮಗುವೊಂದು ಕನ್ನಡದ ಹಾಡಿಗೆ ಪಿಯಾನೋ ಮೂಲಕ ಸಂಗೀತ ಬೆಸೆದಿದೆ. ಈ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವೀಡಿಯೋವನ್ನು ರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ‘ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಅನನ್ಯ ಪ್ರತಿಭೆ ಹಾಗು ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದವರು ಹೇಳಿದ್ದಾರೆ.
ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗು ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು! https://t.co/KvxJPJepQ4
— Narendra Modi (@narendramodi) April 25, 2023