ದೊಡ್ಡಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಚುನಾವಣಾ ಚಾಣಕ್ಯ ಎಂದೇ ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದಲ್ಲಿಂದು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಮತದಾನಕ್ಕೆ ಇನ್ನೆರಡು ದಿನ ಬಾಕಿ ಉಳಿದಿದ್ದು ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿರುವ ಅಮಿತ್ ಶಾ ರವರು ಇಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
Live : ದೊಡ್ಡಬಳ್ಳಾಪುರ ವಿಧಾನಸಭಾ ಕೇತ್ರದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ @AmitShah ಅವರ ರೋಡ್ ಶೋ.#NannaVoteModige#PoornaBahumata4BJP https://t.co/bmFEVxQISi
— BJP Karnataka (@BJP4Karnataka) May 7, 2023
ಈ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮಕ್ಕೆ ಕೈಬೀಸಿ ಹಾರೈಸಿದರು. ಮುಗುವಾಳಪ್ಪ ಸರ್ಕಲ್ ನಿಂದ ಆರಂಭವಾದ ರೋಡ್ ಶೋ ತಾಲ್ಲೂಕು ಕಚೇರಿ ಮುಖಾಂತರ ಹಾದು ಅಂಬೇಡ್ಕರ್ ರಸ್ತೆ ಮೂಲಕ ಸಾಗಿತು. ರಸ್ತೆಯುದ್ದಕ್ಕೂ ನಿಂತಿದ್ದ ಜನ ಮೋದಿ, ಅಮಿತ್ ಶಾ, ಧೀರಜ್ ಮುನಿರಾಜ್ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.






































































