ಮಂಗಳೂರು: ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿ ಯುತ ಮತದಾನ ಮತ್ತು ಚುನಾವಣೆ ಮತ್ತು ಮತ ಎಣಿಕೆ ಪ್ರಕ್ರೀಯೆಗೆ ಸಹಕಾರ ನೀಡಿದ ಎಲ್ಲರಿಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಶನಿವಾರ ಬೆಳಿಗ್ಗೆ 8ಗಂಟೆಯಿಂದ ಅಪರಾಹ್ನ 2ಗಂಟೆಯವರೆಗೆ ನಡೆದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ಗಳ ಮತ ಎಣಿಕೆ ಶಾಂತಿಯುತವಾಗಿ ನಡೆದಿದೆ. 6ಕ್ಷೇತ್ರ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು,2 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ವಿಜೇತರಿಗೆ ಅಭಿನಂದನೆಗಳು. ಈ ಚುನಾವಣೆಯ ಮತ ಎಣಿಕೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು ವಿವಿಧ ಪಕ್ಷ ಗಳ ಅಭ್ಯರ್ಥಿಗಳು, ಏಜೆಂಟರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಶಾಂತಿ ಸುವ್ಯವಸ್ಥೆಗೆ ಹಗಲು ರಾತ್ರಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಮಂಗಳೂರು ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಹಾಗೂ ಚುನಾವಣಾ ಕರ್ತವ್ಯ ದಲ್ಲಿ ನನ್ನ ಜೊತೆ ಸಹಕಾರ ನೀಡಿದ ಜಿಲ್ಲೆಯ ಹೊರ ಜಿಲ್ಲೆಯ ಅಧಿಕಾರಿಗಳಿಗೆ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ಜನತೆ ನೀಡಿರುವ ಸಹಕಾತವನ್ನು ಜಿಲ್ಲಾಧಿಕಾರಿಯವರು ಕೊಂಡಾಡಿದ್ದಾರೆ.



























































