ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲುಂಡ ಹಿನ್ನೆಲೆಯಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಸ್ವತಃ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಸೋಲನ್ನಪ್ಪಿದ್ದಾರೆ. ಪಕ್ಷದ ಈ ಸೋಲಿನ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ಪ್ರಕಟಿಸಿದ ಬೆನ್ನಲ್ಲೇ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ನಿಖಿಲ್ ಕುಮಾರಸ್ವಾಮಿ, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿದ್ದೇನೆ. ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ವರಿಷ್ಠರಿಗೆ ಸಲಹೆ ನೀಡಿದ್ದಾರೆ.