ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್ ನೇಮಕವಾಗಿದ್ದಾರೆ.
ಈವರೆಗೂ ರಾಜ್ಯ ಗುಪ್ತದಳದ ಎಡಿಜಿಪಿಯಾಗಿದ್ದ ದಯಾನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ವರ್ಗಾವಣೆ ಮಾಡಿದೆ.
ಈವರೆಗೂ ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಆತಂರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದೇ ವೇಳೆ, ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎ.ಸಲೀಂ ಅವರನ್ನು ಸಿಐಡಿ ಡಿಜಿಪಿ ಸ್ಥಾನಕ್ಕೆ ನಿಯುಕ್ತಿ ಮಾಡಲಾಗಿದೆ.
ಇದೇ ವೇಳೆ, ಹಿರಿಯ ಪೊಲೀಸ್ ಅಧಿಕಾರಿ ಶರತ್ ಚಂದ್ರ ಅವರು ಗುಪ್ತಚರ ಇಲಾಖೆ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ.