ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ. ಟ್ರಕ್‌ಗೆ ಗೂಡ್ಸ್ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಹಂಪ್ ಬಳಿ ಟ್ರಕ್ ನಿಧಾನವಾಗಿ ಚಾಲನೆ ಮಾಡುವ ವೇಳೆ ಹಿಂಬದಿಯಿಂದ ಜೋರಾಗಿ ಬಂದ ಲಾರಿ ಡಿಕ್ಕಿ ಹೊಡದಿದೆ ಎನ್ನಲಾಗಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿ ಹಲವು ಗಂಟೆಗಳಾದರೂ ಅಪಘಾತಕ್ಕೀಡಾದ ಲಾರಿಯನ್ನ ತೆರವುಗೊಳಿಸದ ಪರಿಣಾನ ಆ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ
























































