ಬೆಂಗಳೂರು: ಕೇಂದ್ರ ಬಿಜೆಪಿ ಸರಕಾರ ಬಡವರ ಅನ್ನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಮಂಗಳವಾರ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಧರಣಿಯಲ್ಲಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಚಿವ ರಾಮಲಿಂಗಾ ರೆಡ್ಡಿ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು.
© 2020 Udaya News – Powered by RajasDigital.
























































