ಹುಬ್ಬಳ್ಳಿ: ಅಧಿಕಾರ ಕಳೆದುಕೊಂಡಿರುವ ರಾಜ್ಯ ಬಿಜೆಪಿಯಲ್ಲೀಗ ಕೋಲಾಹಲದ ಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿರುವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ಬಿಜೆಪಿಯಲ್ಲಿ ಈಗ ಅಶಿಸ್ತು ಮೂಡಿದೆ, ಇದಕ್ಕೆ ಆಪರೇಷನ್ ಕಮಲ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪಕ್ಷದಿಂದ ವಲಸಿಗರು ಬಂದ ನಂತರ ಬಿಜೆಪಿಯಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿಕಂಡುಬಂದಿದೆ. ಅಶಿಸ್ತು ತೋರುವವರ ಬಾಲವನ್ನು ಕಟ್ ಮಾಡ್ತೇವೆ ಎಂದು ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೂ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಉಂಟಾಯಿತು ಎಂದೂ ಅವರು ಹೇಳಿದ್ದಾರೆ.
ಇದೇ ವೇಳೆ, ಅಡ್ಜೆಸ್ಟ್ಮೆಂಟ್ ರಾಜಕಾರಣದ ಬಗ್ಗೆ ಬಹಿರಂಗ ಚರ್ಚೆ ಆಗುತ್ತಿರುವುದು ದುರ್ದೈವ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.