ದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯಿಂದ ಪಾರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತ್ತಿರುವ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾಗಿದೆ. ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
‘ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು’ ಎಂದಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಅಧೀನ ನ್ಯಾಯಾಲ ಪ್ರಕಟಿಸಿರುವ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಹೈಕೋರ್ಟ್ ಮೊರೆ ಹೋಗಿದ್ದರು. ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, , ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು. ವಾದವನ್ನಿ ಆಲಿಸಿರುವ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರಿದ್ದ ಪೀಠ ಶುಕ್ರವಾರ ಆದೇಶ ಪ್ರಕಟಿಸಿದ್ದು, ಈ ಪ್ರಕರಣದಲ್ಲಿ ಅಧೀನ ನ್ಯಾಯಾಲಯದ ತೀರ್ಪಿನಲ್ಲಿ ಗುಜರಾತ್ ಹೈಕೋರ್ಟ್ ಮದ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದೆ.
ಕಳೆದ ಮಾರ್ಚ್‌ನಲ್ಲಿ ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಪರಿಗಣಿಸಿ ಎರಡು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ಈ ತೀರ್ಪಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ. ಅಧೀನ ನ್ಯಾಯಾಲಯದ ತೀರ್ಪಿಗೆ ಹೈಕೋರ್ಟ್ ತಡೆ ನೀಡಿದ್ದಾರೆ ತಾವು ಮತ್ತೆ ಸಂಸದ್ ಸದಸ್ಯತ್ವವನ್ನು ಪಡೆಯಬಹುದೆಂಬ ಹುಮ್ಮಸ್ಸಿನಲ್ಲಿದ್ದ ರಾಹುಲ್ ಗಾಂಧಿಯವರಿಗೆ ಇದೀಗ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನಿಂದ ಹಿನ್ನಡೆಯುಂಟಾಗಿದೆ.






















































