ದೆಹಲಿ: ಪ್ರಕೃತಿ ವಿಕೋಪ ಅಮರನಾಥ ಯಾತ್ರಾರ್ಥಿಗಳ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಭಾರೀ ಮಳೆ, ಭೂಕುಸಿತ ಘಟನೆಗಳಿಂದಾಗಿ ಪವಿತ್ರ ಅಮರನಾಥ ಯಾತ್ರಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ 1,000 ಕ್ಕೂ ಹೆಚ್ಚು ಯಾತ್ರಿಗಳು ಸಿಲುಕಿಕೊಂಡಿದ್ದು, ಇವರಲ್ಲಿ 80ಕ್ಕೂ ಹೆಚ್ಚು ಮಂದಿ ಕರ್ನಾಟಕದವರೂ ಇದ್ದಾರೆ ಎಂದು ಹೇಳಲಾಗುತ್ತಿದೆ.
ಸಂದಿಗ್ಧ ಸ್ಥಿತಿಯಲ್ಲಿರುವ ಇವರಿಗೆ ಅಮರನಾಥದ ಪಂಚತಾರ್ನಿ ಸೇನಾ ಶಿಬಿರಗಳಲ್ಲಿ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ.
ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ, ಅಮರನಾಥ ಯಾತ್ರೆಗೆ ತೆರಳಿರುವ ಗದಗ್ ಮೂಲದ ಸುಮಾರು 23 ಮಂದಿ ಕೂಡಾ ಮಾರ್ಗಮಧ್ಯೆ ಸಿಲುಕಿದ್ದಾರೆ ಎನ್ನಲಾಗಿದೆ. ಸಂಕಷ್ಟಕ್ಕೆ ಸಿಲುಕಿಕೊಂಡಿರುವವರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ ಕಳುಹಿಸಿ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ ಎನ್ನಲಾಗಿದೆ.