ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ ಓಮ್ಮನ್ ಚಾಂಡಿ ವಿಧಿವಶರಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಅವರು ಮಂಗಳವಾರ ಮುಂಜಾನೆ 4.25ಕ್ಕೆ ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
79 ವರ್ಷ ವಯಸ್ಸಿನ ಓಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಲ ಸಮಯದ ಹಿಂದೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು ಐದು ದಶಕಗಳ ಕಾಲ ಕೇರಳದ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿ, ಮುಖ್ಯಮಂತ್ರಿಯಾಗಿದ್ದರು. ಸದ್ಯ ಪುತ್ತುಪಲ್ಲಿ ಶಾಸಕರಾಗಿದ್ದಾರೆ.
ಹಿರಿಯ ನಾಯಕ ಓಮನ್ ಚಾಂಡಿ ಅವರ ನಿಧನಕ್ಕೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.