ಬೆಂಗಳೂರು: ಪ್ರಧಾನಿ ಮೋದಿ ಅವರನ್ನು ಕಟ್ಟಿಹಾಕಲು ಇದೀಗ ಪ್ರತಿಪಕ್ಷಗಳು ಒಗ್ಗೂಡಿವೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಸಭೆ ರಾಷ್ಟ್ರ ರಾಜಕಾರಣದಲ್ಲಿ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಈ ನಡುವೆ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ವೇದಿಕೆಗೆ ‘ಇಂಡಿಯಾ’ ಎಂದು ನಾಮಕರಣ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ.
ಏನಿದು ‘ಇಂಡಿಯಾ’ ?
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ದ ಹೋರಾಡುವ ಸಂಬಂಧ ಯುಪಿಎ ಮೈತ್ರಿಕೂಟದ ಬಹುತೇಕ ಪಕ್ಷಗಳು ಹಾಗೂ ಕೇಂದ್ರದಲ್ಲಿರುವ ವಿವಿಧ ಪಕ್ಷಗಳು ಒಗ್ಗಟ್ಟಿನ ಹೋರಾಟಕ್ಕೆ ಕಸರತ್ತು ನಡೆಸಿವೆ. ಈ ಸಂಬಂಧ ಬಿಜೆಪಿಯೇತರ ಆಡಳಿತವಿರುವ ರಾಜ್ಯದಲ್ಲಿ ಚಕ್ರವ್ಯೂಹ ನಿರ್ಮಿಸಲು ಪ್ರಯತ್ನಿಸಿರುವ ಕಾಂಗ್ರೆಸ್, ಕರ್ನಾಟಕವನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್ ಸರ್ಕಾರವಿರುವ ಕರ್ನಾಟಕಕ್ಕೆ ಕಾಂಗ್ರೆಸ್ ಡಂಡನಾಯಕರ ದಂಡು ಮಾತ್ರವಲ್ಲ, ಎಡಪಕ್ಷಗಳು, ಬಿಜೆಪಿಯ ಸಾಂಪ್ರದಾಯಿಕ ಎದುರಾಳಿ ಪಕ್ಷಗಳು, ಎನ್‌ಡಿಎಯಿಂದ ಇತ್ತೀಚೆಗಷ್ಟೇ ಹೊರಬಂದಿರುವ ಪಕ್ಷಗಳ ಮುಖಂಡರು ಆಗಮಿಸಿದ್ದು, ಪ್ರತಿಪಕ್ಷಗಳ ಸಭೆಗೆ ಶಕ್ತಿ ಬಂದಿದೆ.
We have come together to save Democracy and the Constitution. With one voice, we have agreed to have a name for the alliance.
1⃣The new name is –
🇮🇳 INDIA 🇮🇳
I – Indian
N – National
D – Developmental
I – Inclusive
A – Alliance2⃣ 11-member coordination committee shall be…
— Mallikarjun Kharge (@kharge) July 18, 2023
ಬೆಂಗಳೂರಿನಲ್ಲಿ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯನ್ನು ಸೋಲಿಸಲು ರೂಪಿಸಿರುವ ಪ್ರತಿಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಂಡಿಯಾ ಅಂದರೆ ‘ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್’ ಎಂದು ನಾಮಕರಣ ಮಾಡಲಾಗಿದೆ ಎಂದವರು ವಿವರಿಸಿದ್ದಾರೆ.
LIVE: Press briefing by united like-minded opposition parties, Bengaluru https://t.co/Vx9kwWxw0D
— Karnataka Congress (@INCKarnataka) July 18, 2023
ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ ಎಂದವರು ತಿಳಿಸಿದರು.
ಮುಂಬೈನಲ್ಲಿ ಮತ್ತೆ ಸಭೆ ಸೇರಿ ಪ್ರಚಾರ ನಿರ್ವಹಣೆ ಸಂಬಂಧ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದ ಅವರು, ಈ ಬಗ್ಗೆ ಸದ್ಯದಲ್ಲೇ ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.