ತಿರುವನಂತಪುರಂ: ಕೇರಳದ ಉತ್ತರ ಮತ್ತು ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಆರು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 26 ರವರೆಗೆ ಮಳೆ ಮತ್ತಷ್ಟು ಬಿರುಸುಗೊಳ್ಳಲಿದ್ದು, ಈ ಪ್ರದೇಶದಲ್ಲಿ 64.5 ಮಿಮೀ ನಿಂದ 115.5 ಮಿಮೀ ವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಜುಲೈ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳು ಮತ್ತು ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.




















































