ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿರುವ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆಂದು ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ರವರು ತಿಳಿಸಿದ್ದಾರೆ.
“ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು” ಎಂಬ ವಿಷಯದ ಮೇಲೆ ಈ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಜ್ಞಾನಭಾರತಿ ಆವರಣದಲ್ಲಿರುವ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಬೆಂವಿವಿಯ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್ ಶ್ರೀ ಎಸ್. ಸಿದ್ದಯ್ಯ ಅವರಿಂದ ವಿಚಾರ ಮಂಡನೆ ಮಾಡಲಿದ್ದಾರೆ. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಟಿ.ರಾಜೇಂದ್ರ ಪ್ರಸಾದ್ ರವರು ವಹಿಸಿಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ನಿರ್ದೇಶಕ ಡಾ. ಎಂ. ಗೋವಿಂದರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.