ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 16 ರಿಂದ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 19ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೊಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲೂ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.





















































