ಕೋಲಾರ: ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಪೊಲೀಸರು ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಬಳಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಹತ್ಯೆ ಆರೋಪಿಗಳು ಅವಿತಿದ್ದ ಸ್ಥಳವನ್ನು ಪತ್ತೆಮಾಡಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೊಪಾಯಿಗಳನ್ನು ಶರಣಾಗಲು ಸೂಚಿಸಿದರು. ಆದರೆ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದರೆಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ಹಳೇ ವೈಷಮ್ಯವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಕೇಂದ್ರ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.