ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ.
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಮಾಧ್ಯಮಗಳ ಸಮೀಕ್ಷೆ ಹೇಳಿವೆ. 90 ಸದಸ್ಯಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗಲಿದೆ ಎಂದು ಸಮೀಕ್ಷೆಗಳು ಸುಳಿವು ನೀಡಿದೆ..
ಎಬಿಪಿ ನ್ಯೂಸ್ ಸಮೀಕ್ಷೆ ಪ್ರಕಾರ ಬಿಜೆಪಿ 36-48 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 41-53 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ದೈನಿಕ್ ಭಾಸ್ಕರ್ ಸಮೀಕ್ಷೆ ಪ್ರಕಾರ ಬಿಜೆಪಿ 35-45 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 46-55 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಬಿಜೆಪಿ 36-46 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 40-50 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ ಬಿಜೆಪಿ 30-40 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 46-56 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.





































































