ಚಾಮರಾಜನಗರ: ಅರ್ಹ ಭಾರತೀಯರೆಲ್ಲರಿಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಪ್ರಯೋಜನ ದೊರೆಯುವಂತೆ ಮಾಡಲು ನೆರವಾಗುವ ಕೇಂದ್ರ ಸರ್ಕಾರದ ಮಹತ್ವದ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ಕೈಗೊಂಡಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಪ್ರಚಾರ ಕಾರ್ಯಕ್ರಮ ಗಡಿ ಜಿಲ್ಲೆ ಚಾಮರಾಜನಗರದ ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿಂದು ನಡೆಯಿತು.
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ನೀಡುತ್ತಿರುವ ಹಲವು ಯೋಜನೆಗಳ ಬಳಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಬೆಳೆಗಳಿಗೆ ದ್ರೋಣ್ ಯಂತ್ರದ ಮೂಲಕ ಔಷಧ ಸಿಂಪಡಣೆ ಮಾಡುವ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡು ಶೈಕ್ಷಣಿಕ ಕಲಿಕೆಯಲ್ಲಿ ತೊಡಗಿಸಿಕೊಂಡರು.
ಇದೇ ಸಂದರ್ಭದಲ್ಲಿ ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳು ಹಾಜರಿದ್ದು ರೈತರಿಗೆ ವರದಾನವಾಗಿರುವ ಕೃಷಿ ಚಟುವಟಿಕೆಗಳ ರಕ್ಷಣೆಗೆ ಮಣ್ಣು ಪರೀಕ್ಷೆ,, ಹವಾಮಾನ ಮುನ್ಸೂಚನೆ ಜೊತೆಗೆ ಬೆಳೆಗಳ ರಕ್ಷಣೆಗೆ ನೆರವಾಗುವ ದ್ರೋಣ್ ಮೂಲಕ ಔಷಧ ಸಿಂಪರಣೆ ಕುರಿತು ಮಾಹಿತಿ ಪಡೆದರು.













































































