ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ಬಳಿಕ ರೆಬಲ್ ಆಗಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ನಡೆ ಕುತೂಹಲ ಕೆರಳುವಂತೆ ಮಾಡಿದೆ. ಈ ವರೆಗೂ ರಾಜ್ಯದ ನಾಯಕರ ಬಗ್ಗೆ ಮುನಿಸಿಕೊಂಡಿರುವ ಯತ್ನಾಳ್ ದಿಲ್ಲಿಗೆ ತೆರಳಿದ್ದು ವರಿಷ್ಠರನ್ನು ಭೇಟಿಯಾಗಲಿದ್ದಾರೆ.
ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸದ ಹೊರತು ಪಕ್ಷದ ಯಾವುದೇ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಈ ಬೆಳವಣಿಗೆಯ ನಡುವೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗುತ್ತಿರುವ ಬೆಳವಣಿಗೆ ರಾಜ್ಯದ ರಾಜಕೀಯ ವಿದ್ಯಮಾನಗಳ ರೋಚಕತೆ ಎಂದು ಬಣ್ಣಿಸಲಾಗುತ್ತಿದೆ.
ಈ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೂ ದಿಲ್ಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಡಿಸೆಂಬರ್ 21ರಂದು ದಿಲ್ಲಿಗೆ ಬರುವಂತೆ ಹೈಕಮಾಂಡ್ ವಿಜಯೇಂದ್ರಗೆ ಸೂಚನೆ ರವಾನಿಸಿದ್ದಾರೆ ಎನ್ನಲಾಗಿದೆ
























































