ಬೆಂಗಳೂರು: ಭೂಣ ಹತ್ಯೆ ಮಾಫಿಯಾ ವಿರುದ್ದದ ಕಾರ್ಯಾಚರಣೆ ಬಿರುಸುಗೊಂಡಿರುವಂತೆಯೇ ಆರೋಗ್ಯ ಇಲಾಖೆ ಕೂಡಾ ನಿಷ್ಟೂರ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಭ್ರೂಣ ಹತ್ಯೆಯ ಕರಾಳತೆಗೆ ಸಂಪೂರ್ಣ ಬ್ರೇಕ್ ಹಾಕಲು ಪಣತೊಟ್ಟಿರುವ ಆರೋಗ್ಯ ಇಲಾಖೆ ಸಾರ್ವಜನಿಕರ ನೆರವನ್ನು ಕೋರಿದೆ.
ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆ, ಭ್ರೂಣ ಹತ್ಯೆ ಸುಳಿವು ನೀಡುವವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.
ಬಿಜೆಪಿ ಸರ್ಕಾರದ ಅವಧಿಯಿಂದಲೂ ರಾಜ್ಯದಲ್ಲಿ ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿತ್ತು, ನಮ್ಮ ಸರ್ಕಾರ ಬಂದಿದ್ದೇ ತಡ ಈ ಅನಿಷ್ಠ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.
ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಗಟ್ಟಲು ಮಹತ್ವದ ಹೆಜ್ಜೆ ಇಡಲಾಗಿದೆ. pic.twitter.com/af5hdT8rgW
— Karnataka Congress (@INCKarnataka) December 18, 2023
























































