ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮದ (KKRTC) ನೌಕರರಿಗೆ ಬಂಪರ್ ಕೊಡಿಗೆ ಪ್ರಕಟಿಸಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ..KKRTC ಸಿಬ್ಬಂದಿ ಸಮೂಹಕ್ಕೆ ಪ್ರೀಮಿಯಂ ರಹಿತ ಅಪಘಾತ ವಿಮಾ ಯೋಜನೆಗೆ ಮುನ್ನುಡಿ ಬರೆಯಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರವಿಮಾ ಯೋಜನೆ ಜಾರಿಗೆ ಬಂದಿದ್ದು ನಿಗಮದ ಕ್ರಮಕ್ಕೆ ನೌಕರ ಸಮೂಹ ಹರ್ಷ ವ್ಯಕ್ತಪಡಿಸಿದೆ.
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KKRTC) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ತನ್ನ ನಿಗಮದ ಸಿಬ್ಬಂದಿಗಳಿಗಾಗಿ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿರುತ್ತದೆ. ಅದರ ಮುಂದುವರೆದ ಭಾಗವಾಗಿ ಮತ್ತೊಂದು ಮಹತ್ವದ ಯೋಜನೆಯಾದ ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು (ಗುರುವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ.ರಾಚಪ್ಪ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕರ್ನಾಟಕ ವಲಯ ಮುಖ್ಯಸ್ಥರಾದ ನವನೀತ್ ಕುಮಾರ್ ಅವರು ಒಡಂಬಡಿಕೆ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ದಿನಾಂಕ:21-12-2023 ರಂದು ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಂಡಿರುತ್ತದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರರಿಸಿದ ಯೂನಿಯನ್ ಬ್ಯಾಂಕ್‌ಗೆ ಕೃತಜ್ಞತೆ ಸಲ್ಲಿಸಿದರು.
ಈ ಯೋಜನೆಯ ವೈಶಿಷ್ಟ್ಯಗಳು ಹೀಗಿವೆ:
ಈ ವಿಮಾ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ರೂ.1.20 ಕೋಟಿಯ ಅಪಘಾತ ವಿಮೆ ಹಣ ದೊರಕಲಿದೆ.
ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನತೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದೆ.
ಡೆಬಿಟ್ ಕಾರ್ಡ ಮೇಲೆ ರೂ.15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿಯಾಗಿದೆ.
ಸದರಿ ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷದ ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ರೂ.1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.
ಈ ಸಂದರ್ಭದಲ್ಲಿ ಎಸ್. ಭರತ್ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಡಾ.ಕೆ ನಂದಿನಿ ದೇವಿ, ನಿರ್ದೇಶಕರು ( ಸಿ&ಜಾ), ಕೆ ಎಸ್ ಆರ್ ಟಿ ಸಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರವಾಗಿ. ವೆಂಕಟ್ ಸುದೀರ ಚೀದೆಲ್ಲ, ಪ್ರಾದೇಶಿಕ ಮುಖ್ಯಸ್ಥರು ಕಲಬುರಗಿ ಹಾಗೂ ನಾಗಭೂಷಣ. ಜಿ.ಆರ್. ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಿ.ಆರ್.ಸಿ. ಬೆಂಗಳೂರು, ನಾಗರಾಜ್ ದೇಶನೂರು, ಮುಖ್ಯ ವ್ಯವಸ್ಥಾಪಕರು ಸಿ.ಆರ್.ಸಿ. ಬೆಂಗಳೂರು ಹಾಜರಿದ್ದರು.





































































ಈ ಯೋಜನೆಯ ವೈಶಿಷ್ಟ್ಯಗಳು ಹೀಗಿವೆ: 