ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ನಿಷೇಧ ತೆರವು ಕುರಿತಂತೆ ಸಿಎಂ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರುವ ನಿರ್ಧಾರ ಶೋಭೆ ತರುವಂತಹದ್ದಲ್ಲ ಎಂದಿದ್ದಾರೆ. ಎಲ್ಲಿಯವರೆಗೆ ಇದೇ ರೀತಿ ಮಾಡ್ತಾರೆ ಅಂತ ನೋಡೋಣ ಎಂದ ಬಿಎಸ್ವೈ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ಬುದ್ಧಿ ಕಲಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.