ಬೆಂಗಳೂರು: ರೈತರ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ ಎನ್ನಲಾದ ಸಚಿವ ಶಿವಾನಂದ ಪಾಟೀಲ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಶಿವಾನಂದ ಪಾಟೀಲ ಅವರು ಬೇಷರತ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಹೆಚ್ಡಿಕೆ, ಸಚಿವ ಶಿವಾನಂದ ಪಾಟೀಲರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದಿದ್ದಾರೆ.
‘ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.
ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.
ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 25, 2023


























































