ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಕ ಮಾಡಿದೆ. ಇದೇ ವೇಳೆ ಎರಡೂ ಸದನಗಳ ವಿಪಕ್ಷ ಉಪನಾಯಕರನ್ನು ಹಾಗೂ ಮುಖ್ಯ ಸಚೇತಕರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ವರಿಷ್ಠರ ನಿರ್ದೇಶನದಂತೆ ವಿರೋಧ ಪಕ್ಷದ ನಾಯಕ ಹಾಗೂ ಉಪನಾಯಕರ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕಟಿಸಿದ್ದಾರೆ.
ಪಟ್ಟಿ ಹೀಗಿದೆ :
- ಕೋಟ ಶ್ರೀನಿವಾಸ ಪೂಜಾರಿ: ಮೇಲ್ಮನೆ ವಿಪಕ್ಷ ನಾಯಕ,
- ಸುನೀಲ್ ವಲ್ಯಾಪುರೆ : ಮೇಲ್ಮನೆ ವಿಪಕ್ಷ ಉಪ ನಾಯಕ,
- ಎನ್. ರವಿಕುಮಾರ್ ಕುಮಾರ್ : ವಿಧಾನ ಪರಿಷತ್ ಮುಖ್ಯ ಸಚೇತಕ.
- ಅರವಿಂದ್ ಬೆಲ್ಲದ್: ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ,
- ದೊಡ್ಡನಗೌಡ ಪಾಟೀಲ್: ವಿಧಾನಸಭೆ ಮುಖ್ಯ ಸಚೇತಕ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರ ಸೂಚನೆಯ ಮೇರೆಗೆ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಾಯಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ನೂತನವಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಿಮ್ಮ ನೇತೃತ್ವದಲ್ಲಿ ಪಕ್ಷವು ಶಾಸಕಾಂಗ ಜವಾಬ್ದಾರಿಯನ್ನು… pic.twitter.com/NWw6HFHNsx
— BJP Karnataka (@BJP4Karnataka) December 25, 2023

























































