ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತೆ ಸಂಬಂಧ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ . ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದರು.






















































