ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅವಧಿಗೆ ಪ್ರಧಾನಮಂತ್ರಿಯಾಗಬೇಕು ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ರಷ್ಯಾ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧ ಕುರಿತು ಈ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರ ಆಡಳಿತದ ಬಗ್ಗೆ ಗುಣಗಾನ ಮಾಡಿರುವ ರಷ್ಯಾ ಅಧ್ಯಕ್ಷ ಪುಟಿನ್, ಪ್ರಧಾನಿ ಮೋದಿ ಅವರನ್ನು ರಷ್ಯಾಕ್ಕೆ ಆಹ್ವಾನಿಸಿದ್ದಾರೆ. ಇದೇ ವೇಳೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ವಿಜಯ ಸಾಧಿಸಲಿ ಎಂದು ಶುಭ ಹಾರೈಸಿರುವ ಪುಟಿನ್, ನಮ್ಮ ಸ್ನೇಹಿತರ ಪ್ರತಿ ಯಶಸ್ಸನ್ನು ಹಾರೈಸುತ್ತೇನೆ ಎಂದು ಎಂದಿದ್ದಾರೆ.























































