ಬೆಂಗಳೂರು: ರಾಜ್ಯದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ರಾಜ್ಯದ ಹಿರಿಯ ಶಾಸಕರಾಗಿರುವ ಆರ್.ವಿ.ದೇಶಪಾಂಡೆ ಅವರು ಹಳಿಯಾಳ -ಜೋಯಿಡಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರನ್ನು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಅಧಿಕೃತವಾಗಿ ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.





































































