ಬೆಂಗಳೂರು : ನಾಮ ಹಾಕಿದ ಸಚಿವ ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪಟ್ಟುಹಿಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಪ್ರಕರಣ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯೆ ನೀಡಿದರು.
ಶಿಕ್ಷಣ ಸಚಿವರು ಚೆಕ್ ಬೌನ್ಸ್ ಮಾಡಿ ಯಾರಿಗೋ ನಾಮ ಹಾಕಿದ್ದಾರೆ. ಕೋರ್ಟ್ ಆದೇಶ ಬಂದ ನಂತರವೂ ಆ ಸಚಿವರ ರಾಜೀನಾಮೆ ಪಡೆಯದೆ ಮುಖ್ಯಮಂತ್ರಿಯವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಸಚಿವರ ರಾಜೀನಾಮೆ ಪಡೆಯಬೇಕೆಂದು ಆರ್.ಅಶೋಕ್ ಅವರು ಆಗ್ರಹಿಸಿದರು.






















































