ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಲ್ಪಟ್ಟಿರುವ ಸಚಿವ ಮಧು ಬಂಗಾರಪ್ಪ ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಹೇಳಿದೆ. ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿದ ಪ್ರಕರಣ ಅದಲ್ಲ, ಸರ್ಕಾರಕ್ಕೆ ಸಂಬಂಧಿಸಿದ ಹಗರಣವೂ ಅಲ್ಲ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ. ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.
ಮಧು ಬಂಗಾರಪ್ಪನವರ ವಯಕ್ತಿಕ ವ್ಯವಹಾರವನ್ನು ಹಿಡಿದು ಜಗ್ಗಾಡುತ್ತಿರುವ ಬಿಜೆಪಿ ನಾಯಕರು ತಮ್ಮ ತಮ್ಮದೇ ಪಕ್ಷದ ನಾಯಕರು ಹೇಳಿದ 40 ಸಾವಿರ ಕೋಟಿ ರೂಪಾಯಿಯ ಬೃಹತ್ ಹಗರಣದ ಬಗ್ಗೆ ಜನತೆಗೆ ಉತ್ತರ ನೀಡುವುದು ಯಾವಾಗ ಎಂದು ಪ್ರಶ್ನಿಸಿದೆ. ಅದು ಜನರ ಬೆವರಿನ ಹಣ, ಸರ್ಕಾರದ ಹಣ ಎಂದಿರುವ ಕಾಂಗ್ರೆಸ್, ಮಧು ಬಂಗಾರಪ್ಪನವರ ಕತೆ ಬಿಟ್ಟು 40 ಸಾವಿರ ಕೋಟಿಯ ಬಗ್ಗೆ ಉತ್ತರ ನೀಡಿ ಎಂದು ಎದಿರೇಟು ನೀಡಿದೆ.
ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ,
ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲ.
ಮಧು ಬಂಗಾರಪ್ಪನವರ ವಯಕ್ತಿಕ ವ್ಯವಹಾರವನ್ನು ಹಿಡಿದು…
— Karnataka Congress (@INCKarnataka) January 1, 2024






















































