ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚುನಾವಣಾ ಹಿಂದೂ ಎಂದು ಗೇಲಿ ಮಾಡಿರುವ ಪ್ರತಿಪಕ್ಷ ಬಿಜೆಪಿ, ಮಸೀದಿಗೆ ಹೋಗಿ ಫೋಸು ಕೊಡುವ ಸಿಎಂ ಸಿದ್ದರಾಮಯ್ಯ ಅವರಿಗೆ ದೇವಿ ದೇವಾಲಯಕ್ಕೆ ತೆರಳಲು ಸಮಯವಿಲ್ಲ ಎಂದು ಟೀಕಿಸಿದೆ.
ವಿಜಯಪುರ ಭೇಟಿ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೇವಾಲಯ ಆವರಣಕ್ಕೆ ತೆರಳಿದ್ದರಾದರೂ ದೇವರ ಬಳಿ ತೆರಳಲ್ಲು ನಿರಾಕರಿಸಿದ ಸನ್ನಿವೇಶ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಪ್ರಸಂಗವನ್ನೇ ಮುಂದಿಟ್ಟು ಸಿದ್ದರಾಮಯ್ಯ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿರುವ ಬಿಜೆಪಿ, ಸಿದ್ದರಾಮಯ್ಯ ಅವರು ‘ಚುನಾವಣಾ ಹಿಂದೂ’ ಎಂದು ಬಣ್ಣಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ‘ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ’ ಎಂದು ಟೀಕಿಸಿದೆ.
ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪಿ ಪ್ರಶ್ನಿಸಿರುವ ವೈಖರಿಯೂ ಗಮನಸೆಳೆದಿದೆ.
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು.
ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ.
ಸಿಎಂ @siddaramaiah ಅವರೇ,… pic.twitter.com/wd8LRjBGb4
— BJP Karnataka (@BJP4Karnataka) January 3, 2024