ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತ ನಾಲ್ವರನ್ನು ಬಲಿತೆಗೆದುಕೊಂಡಿದೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ಬಳಿ, ಬೆಳಗ್ಗಿನ ಜಾವ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಆ ಕಾರುಗಳು ರಸ್ತೆ ಬದಿ ನಿಙತಿದ್ದಾಗ ಈ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮೃತರನ್ನು ಹಾಸನ ಮತ್ತು ಬೆಂಗಳೂರು ಮೂಲದವರೆನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.