ಬೆಂಗಳೂರು: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣವಾಗಿದ್ದು ಲೋಕಾರ್ಪಣೆಗೆ ತಯಾರಿ ನಡೆದಿದೆ. ಈ ಉದ್ಘಾಟನೆಯ ಸನ್ನಿವೇಶ ಇಡೀ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಇದೇ ಸಂದರ್ಭದಲ್ಲಿ ಕರುನಾಡಿನಲ್ಲೂ ವೈಭವದ ಕೈಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜನವರಿ 22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಸೂಚನೆ ನೀಡಿದ್ದಾರೆ.
ರಾಮಲಿಂಗ ರೆಡ್ಡಿ ಅವರು ಮುಜರಾಯಿ ಸಚಿವರಾದ ನಂತರ ದೇಗುಲಗಳ ವಿಚಾರದಲ್ಲಿ ಮಹತ್ವದ ಪರಿಣಾಮಕಾರಿ ಬದಲಾವಣೆ ತಂದಿದ್ದು ಆಸ್ತಿಕರ ಹಾಗೂ ಧಾರ್ಮಿಕ ಪ್ರಮುಖರ ಮೆಚ್ಚುಗೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕವನ್ನು ‘ಸರ್ವ ಧರ್ಮಗಳ ಶಾಂತಿಯ ತೋಟ’ವನ್ನಾಗಿ ಮಾಡುವ ಪಣ ತೊಟ್ಟಿರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಪೂರಕವಾಗಿ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರು ಮಹತ್ವದ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಆಯೋಜಿಸಬೇಕೆಂದು ಅವರು ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಸಾಧ್ಯವೇ ಸುತ್ತೋಲೆ ಹೊರಡಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದೇನೆ. #RamalingaReddy #Karnataka #RamMandirAyodhya #RamMandir #HinduTemple pic.twitter.com/2eTCR9NaJN
— Ramalinga Reddy (@RLR_BTM) January 7, 2024




















































