ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸದ್ಯಕ್ಕಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೆಚ್ಚುವರಿ ಡಿಸಿಎಂ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇಲ್ಲ ಎಂದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ ಕೇವಲ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು ಎಂದ ಅವರು, ಸದ್ಯಕ್ಕೆ ಸರ್ಕಾರ ನಡೆಸುವ ಕಡೆ, ಸಮಸ್ಯೆ ಕಡೆ ಹಾಗೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ನಾವು ಗಮನ ಕೊಡಬೇಕಿದೆ ಎಂದು ಹೇಳಿದರು.






































































