ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳ ಲಾಭ ಪಡೆದವರಲ್ಲಿ ಮುಸ್ಲಿಂ ಮಹಿಳೆಯರು ಹೆಚ್ಚಿದ್ದಾರೆ. ಮುದ್ರಾ, ಆಯುಷ್ಮಾನ್, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವು ಯೋಜನೆಯ ಫಲಾನುಭವಿಗಳಾಗಿದ್ದು, ಅವರು ಸುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುತ್ತಿದ್ದು, ಅದು ಅತ್ಯಂತ ಯಶಸ್ವಿಯಾಗಲಿದೆ. ಇದು ಬದಲಾವಣೆ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಯೋಜನೆಗಳ ಫಲಾನುಭವಿಗಳಾಗಿರುವ ಆ ತಾಯಂದಿರಿಗೆ ಅದರ ಅರಿವಿದೆ, ಆದರೆ, ಅದನ್ನು ಅದುಮಿಡುವ ಕೆಲಸ ಮಾಡುತ್ತಿದ್ದಾರೆ. ಅದರಿಂದ ಹೊರ ಬಂದು ಶುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುದ್ದಾರೆ. ಇದು ಅತ್ಯಂತ ಯಶಸ್ವಿಯಾಗಲಿದೆ. ಇಂಡಿ ಒಕ್ಕೂಟಕ್ಕೆ ಇದು ಹಿನ್ನಡೆ ಆಗಲಿದೆ ಎಂದು ಹೇಳಿದರು.super
ಕರ್ನಾಟಕದಿಂದ ಹೂಡಿಕೆದಾರರು ಹೊರರಾಜ್ಯಗಳಿಗೆ ಹೋಗುತ್ತಿರುವ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಬಂದ ಕೂಡಲೇ ಬಂಡವಾಳ ಹೂಡಿಕೆದಾರರು ಹೊರಗೆ ಹೋಗುವಂತ ವಾತಾವರಣ ಸೃಷ್ಟಿ ಮಾಡಿದ್ದಾರೆ. ನಮ್ಮ ಕಾಲದಲ್ಲಿ ಹೂಡಿಕೆ ಮಾಡಲು ಬಂದವರು ವಾಪಸ್ ಹೋಗುತ್ತಿದ್ದಾರೆ. ಬಂಡವಾಳ ಹೂಡಿಕೆ ಆಕರ್ಷಣೆ ಆಗುತ್ತಿಲ್ಲ. FDI ನಲ್ಲಿ ಶೇ. 30% ಕಡಿತ ಆಗಿದೆ. ಮುಖ್ಯಮಂತ್ರಿಗಳು ತಮ್ಮ ಸ್ಥಾನ ಉಳಿಸಿಕೊಳ್ಳುವ ರಾಜಕಾರಣದಲ್ಲಿ ಮಗ್ನರಾಗಿದ್ದಾರೆ. ರೈತರಿಗೆ ಬರ ಪರಿಹಾರ ನೀಡಿಲ್ಲ. ಅಭಿವೃದ್ಧಿಗೆ ನಯಾ ಪೈಸೆ ಹಣ ಬಿಡುಗಡೆ ಆಗಿಲ್ಲ. ಬಂಡವಾಳ ಹೂಡಿಕೆಗೆ ಯಾರೂ ಬರುತ್ತಿಲ್ಲ. ಸಿಎಂ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಅಲ್ಲದೇ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ರಚಿಸಿರುವ ಸಮಿತಿಗೆ ಕ್ಯಾಬಿನೆಟ್ ದರ್ಜೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಸಿದ ಅವರು, ಸಿಎಂ ಸಲಹೆಗಾರರನ್ನು ತೆಗೆದುಕೊಳ್ಳಬೇಕು ನಿಜ. ಅದು ಸದಸ್ಯರ ಶೇ 15% ಮೀರದಂತೆ ಕ್ಯಾಬಿನೆಟ್ ದರ್ಜೆ ಕೊಡಬೇಕು. ಅದಕ್ಕಿಂತ ಹೆಚ್ಚು ಕ್ಯಾಬಿನೆಟ್ ದರ್ಜೆ ಕೊಡುವಂತಿಲ್ಲ. ಹಿಂದೆ ಸಿಎಂ ಆಗಿದ್ದಾಗ ಆ ರೀತಿ ಮಾಡಬಾರದು ಎಂದು ಆದೇಶ ಇದೆ. ಇದು ಸಂವಿಧಾನ ವಿರುದ್ಧ ಮಾಡಿ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಹೇಳಿದರು.


























































