ಬೆಂಗಳೂರು: ರಾಜಧಾನಿ ಬೆಂಗಳೂರಿನ ರೇಸ್ಕೋರ್ಸ್’ನಲ್ಲಿ ಅಕ್ರಮವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ರೇಸ್ಕೋರ್ಸ್ ಬುಕ್ಕಿಂಗ್ ಕೌಂಟರ್ ಬಳಿ 3.47 ಕೋಟಿ ರೂ. ಹಣವನ್ನು ಜಪ್ತಿಮಾಡಿದ್ದಾರೆ.
ರೇಸ್ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ತಡರಾತ್ರಿ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ.
ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದ ಆರೋಪ ಕೇಳಿಬಂದಿತ್ತು. ಇದೇ ಸಂದರ್ಭದಲ್ಲಿ ರೇಸ್ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ದಾಳಿ ಮಾಡಿ ತಡರಾತ್ರಿ ವರೆಗೂ ಸುದೀರ್ಘ ತಪಾಸಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.