ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಲುವುದಿಲ್ಲ ಎಂದು ಬಿಎಸ್‌ಪಿ ಘೋಷಿಸಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಬಿಎಸ್‌ಪಿ ನಾಯಕಿ ಮಾಯಾವತಿ, ಚುನಾವಣೆಯಲ್ಲಿ ತಮ್ಮ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ ಚುನಾವಣೋತ್ತರ ಮೈತ್ರಿ ಬಗ್ಗೆ ಪರಿಶೀಲಿಸುತ್ತೇವೆ ಎಂದಿದ್ದಾರೆ.
ಬೇರೆ ಪಕ್ಷದೊಂದಿಗೆ ಮೈತ್ರಿ ಮಾಡಿದಾಗಲೆಲ್ಲಾ ಬಿಎಸ್‌ಪಿಗೆ ಹೆಚ್ಚಿನ ನಷ್ಟವಾಗಿದೆ. ಜೊತೆಗೆ ಮತಗಳು ಕೂಡಾ ಬೇರೆ ಪಕ್ಷಕ್ಕೆ ವರ್ಗಾಯಿಸಲ್ಪಡುತ್ತವೆ ಎಂದು ಹೇಳಿದ್ದಾರೆ.







































































