ಬೆಂಗಳೂರು: ಲೋಕಸಭಾ ಚುನಾವಣೆಯ ತಯಾರಿಯಲ್ಲಿರುವ ಬಿಜೆಪಿ ಇದೀಗ ಜಿಲ್ಲಾ ಘಟಕಗಳನ್ನೂ ಸಜ್ಜುಗೊಳಿಸಿದೆ. ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಲೋಕಸಭಾ ಚುನಾವಣಾ ತಯಾರಯ ವೇಗವನ್ನು ಹೆಚ್ಚಿಸಿದೆ.
ಬಿಜೆಪಿ ಪಕ್ಷದ 39 ಸಂಘಟನಾ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಜೊತೆಗೆ ನೂತನ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದಾರೆ.
ಪಕ್ಷದ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನೂತನ ಜಿಲ್ಲಾಧ್ಯಕ್ಷರುಗಳಿಗೆ ಹಾಗೂ ವಿವಿಧ ಘಟಕಗಳಿಗೆ ನಿಯುಕ್ತಿಗೊಂಡಿರುವ ನೂತನ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳು.
ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ಲೋಕಸಮರದಲ್ಲಿ ತಾವು… pic.twitter.com/kfrlFHZeBF— Vijayendra Yediyurappa (@BYVijayendra) January 14, 2024






































































