ಹಾವೇರಿ: ಹಾನಗಲ್ ಬಳಿ ನಡೆದಿರುವ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ತಮ್ಮದೇ ಸಮುದಾಯದ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಕೃತ್ಯದ ಆರೋಪಿಗಳಿಗಾಗಿ ಕಾರ್ಯಾಚರಣೆ ಬಿರುಸುಗೊಳಿಸಿರುವ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಸಾದಿಕ್ ಅಗಸಿಮನಿ ಮತ್ತು ನಿಯಾಜ್ ಅಹ್ಮದ್ ಮುಲ್ಲಾ ಎಂಬಿಬ್ಬರನ್ನು ಬಂಧಿಸಿರುವ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಗುರಿಪಡಿಸಿದ್ದಾರೆ. ಇದೀಗ ರೇಪ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.


























































