ಹೈದರಾಬಾದ್ : ಆಂಧ್ರಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ವೈ.ಎಸ್.ಶರ್ಮಿಳಾ ಅವರನ್ನು ಎಐಸಿಸಿ ನೇಮಕ ಮಾಡಿದೆ.
ಆಂಧ್ರಪ್ರದೇಶ ಸಿಎಂ ಜಗನ್ ಸಹೋದರಿ ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿ ಕೆಲವು ದಿನಗಳ ಹಿಂದಷ್ಟೇ ಕೈ ಪಾಳಯ ಸೇರಿದ್ದರು.
ಈ ನಡುವೆ ತೆರವಾಗಿರುವ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶರ್ಮಿಳಾ ಅವರನ್ನು ಎಐಸಿಸಿ ನೇಮಕ ಮಾಡಿದೆ.



















































